ಎನಗೂ ಆಣೆ ರಂಗ ನಿನಗೂ ಆಣೆ
ಎನಗು ನಿನಗೂ ಇಬ್ಬರಿಗೂ ಭಕ್ತರಾಣೆ
ಎನಗು ನಿನಗೂ ಇಬ್ಬರಿಗೂ ಭಕ್ತರಾಣೆ
ನಿನ್ನ ಬಿಟ್ಟು ಅನ್ಯರ ಭಜಿಸಿದರೆನಗೆ ಆಣೆ ರಂಗ
ಎನ್ನ ನೀ ಕೈ ಬಿಟ್ಟು ಪೋದರೆ ನಿನಗೆ ಆಣೆ
ಎನ್ನ ನೀ ಕೈ ಬಿಟ್ಟು ಪೋದರೆ ನಿನಗೆ ಆಣೆ
ತನುಮನಧನದಲ್ಲಿ ವಂಚಕನಾದರೆ ಎನಗೆ ಆಣೆ ರಂಗ
ಮನಸ್ಸು ನಿನ್ನಲಿ ನಿಲಿಸದಿದ್ದರೆ ನಿನಗೆ ಆಣೆ
ಮನಸ್ಸು ನಿನ್ನಲಿ ನಿಲಿಸದಿದ್ದರೆ ನಿನಗೆ ಆಣೆ
ಕಾಕು ಮನುಜರ ಸಂಗವ ಮಾಡಿದರೆನಗೆ ಆಣೆ ರಂಗ
ಲೌಕಿಕವ ಬಿಡಿಸದಿದ್ದರೆ ನಿನಗೆ ಆಣೆ
ಲೌಕಿಕವ ಬಿಡಿಸದಿದ್ದರೆ ನಿನಗೆ ಆಣೆ
ಶಿಷ್ಟರ ಸಂಗವ ಮಾಡದಿದ್ದರೆ ಎನಗೆ ಆಣೆ ರಂಗ
ದುಷ್ಟರ ಸಂಗವ ಬಿಡಿಸದಿದ್ದರೆ ನಿನಗೆ ಆಣೆ
ದುಷ್ಟರ ಸಂಗವ ಬಿಡಿಸದಿದ್ದರೆ ನಿನಗೆ ಆಣೆ
ಹರಿ ನಿನ್ನಾಶ್ರಯ ಮಾಡದಿದ್ದರೆ ಎನಗೆ ಆಣೆ ರಂಗ
ಪುರಂದರವಿಠಲ ನೀನೊಲಿಯದಿದ್ದರೆ ನಿನಗೆ ಆಣೆ
ಪುರಂದರವಿಠಲ ನೀನೊಲಿಯದಿದ್ದರೆ ನಿನಗೆ ಆಣೆ
3 ನೀವು ಹೇಳಿದ್ದು:
ಭಕ್ತ ಹಾಗು ಭಗವಂತರ ಸಂಬಂಧವನ್ನು ಹೇಳುವ ದಾಸರ ಈ ಕೀರ್ತನೆ ತುಂಬ ಸೊಗಸಾಗಿದೆ. ಧನ್ಯವಾದಗಳು.
ದಾಸರು ಮತ್ತು ಭಗವ೦ತನ ನಡೆಯುವ ಸ೦ವಾದದ ಭಕ್ತಿ ಗೀತೆ ಯನ್ನು ಪ್ರಸ್ತುತ ಪಡಿಸಿದ್ದೀರಿ. ಅಭಿನ೦ದನೆಗಳು.
ಅನ೦ತ್
ಆಣೆ ಪುರಾಣ ಸೂಪರಾಗಿತ್ತು ಸರ್...
Post a Comment